ನಿಮ್ಮ ಕಂಡು
ನಿಮ್ಮ ಕಂಡು, ಕೈಮುಗಿದು, ನಿಮಗೆ ಭಕ್ತನಾದೆನಲ್ಲದೆ, ನಿಮ್ಮ ಕಾಣದಲೆ ಕೈಮುಗಿವ ಭಕ್ತಿಯುಂಟೆ ಅಯ್ಯಾ? ನಿಮ್ಮ ಮುಟ್ಟಿ ಪೂಜಿಸಿ ಆಚಾರಿಯಾದೆನಲ್ಲದೆ, ನಿಮ್ಮ ಮುಟ್ಟದಲೆ ಎನಗಾಚಾರವೆಲ್ಲಿಯದಯ್ಯಾ?
Basavanna